ರಾಜ್ಯ
ಆರು ಕೋಟಿ ರೂಪಾಯಿ ಮೌಲ್ಯದ ತಿಮಿಂಗಲ ವಾಂತಿ ವಶ

ಮಡಿಕೇರಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆರು ಕೋಟಿ ರೂಪಾಯಿ ಬೆಲೆ ಬಾಳುವ ತಿಮಿಂಗಲ ವಾಂತಿ, ಅಂಬರ್ ಗ್ರೀಸ್ ವಶಪಡಿಸಿಕೊಳ್ಳಲಾಗಿದೆ.
ಮಾರುತಿ ವ್ಯಾನ್ ನಲ್ಲಿ ಸಾಗಿಸುತ್ತಿದ್ದ ಅಂಬರ್ ಗ್ರೀಸ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಸೋಮವಾರ ಪೇಟೆಯ ಕರೀಂ ಬೇಗ್ ಮತ್ತು ಅಬ್ದುಲ್ಲಾ ಶರೀಫ್ ಎಂದು ಗುರುತಿಸಲಾಗಿದೆ.
ಮಡಿಕೇರಿ ಕಡೆ ಆರೋಪಿಗಳು ಪ್ರಯಾಣಿಸುತ್ತಿದ್ದ ವೇಳೆ ಅವರ ಬಳಿ ಇದ್ದ ಆರು ಕಿಲೋ ಅಂಬರ್ ಗ್ರೀಸ್ ವಶಪಡಿಸಲಾಗಿದೆ. ಸುಗಂಧ ದ್ರವ್ಯ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತಿದೆ