ರಾಜ್ಯ
ಪಟಾಕಿ ಅಂಗಡಿಯಲ್ಲಿ ಸ್ಫೋಟ: ಐವರ ಸಾವು, 10 ಮಂದಿಗೆ ಗಾಯ

ಚೆನ್ನೈ(ತಮಿಳುನಾಡು): ಪಟಾಕಿ ಅಂಗಡಿಯೊಂದರಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಐವರು ಅಸುನೀಗಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಮಂಗಳವಾರ ರಾತ್ರಿ ಈ ದುರಂತ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.
ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಒಂದು ಬೈಕ್ ಕೂಡ ಹೊತ್ತಿ ಉರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.