ಕರಾವಳಿ
ಉಡುಪಿ: ಕುಸಿದುಬಿದ್ದು ಬ್ಯಾಂಕ್ ಉದ್ಯೋಗಿ ಮೃತ್ಯು

ಉಡುಪಿ : ಬ್ಯಾಂಕ್ ಉದ್ಯೋಗಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಬೈಲಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಯಾಗಿರುವ ಗುರುಪ್ರಸಾದ್ ರಾವ್(43) ಮೃತಪಟ್ಟವರು. ಇವರು ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗಂಟಲು ಉರಿ ಬರುತ್ತಿರುವುದಾಗಿ ತಾಯಿಯಲ್ಲಿ ಹೇಳಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ತಾನು ವಾಸವಿದ್ದ ಫ್ಲ್ಯಾಟಿನಲ್ಲಿ ಹಠಾತ್ ಕುಸಿದು ಬಿದ್ದವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅದರಂತೆ ಗುರು ಪ್ರಸಾದ್ ರಾವ್ ಅವರು, ಹೃದಯಾಘಾತದಿಂದಲೋ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿ ಮೃತರ ಅಕ್ಕ ಜ್ಯೋತಿ ಜಿ. ನಾಯಕ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.