ಕರಾವಳಿ
ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಜನಪದ ವಿದ್ವಾಂಸ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರಿಗೆ ಅಭಿನಂದನಾ ಸಮಾರಂಭ

ಜನಪದ ವಿದ್ವಾಂಸ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರನ್ನು ಕೇದಾರೋತ್ಥಾನ ಟ್ರಸ್ಟಿನ ಅಧ್ಯಕ್ಷರು, ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಇಂದು ದಿನಾಂಕ 04-11-2021 ರಂದು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಸಹ ವಕ್ತಾರರಾದ ಶಿವಕುಮಾರ್, ಸ್ಥಳೀಯರಾದ ರಿಕೇಶ್, ಉಮೇಶ್, ವಿಜಯ್ ಭಟ್, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.