ಕರಾವಳಿ

ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ ಜಿಲ್ಲೆಯಲ್ಲಿ ಮಾ.21ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಮಾರ್ಚ್ 21 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ, ಕಾಲೇಜು ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಸಮವಸ್ತ್ರ ವಿವಾದದ ಕುರಿತು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಬ್ಯಾನರ್ ಅಳವಡಿಸುವುದು, ಸಭೆ ಹಾಗೂ ಸಮಾರಂಭಗಳನ್ನು ನಡೆಸುವುದು, ಪಟಾಕಿಗಳನ್ನು ಸಿಡಿಸುವುದು, ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದು ಮತ್ತು ಶಾಲಾ, ಕಾಲೇಜುಗಳ ಆವರಣದಲ್ಲಿ ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಯಾವುದೇ ಅಪರಿಚಿತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!