ಸುಳ್ಯ : ಹಳೆ ಕಟ್ಟಡದ ಗೋಡೆ ಬಿದ್ದು ಗುಜಿರಿ ವ್ಯಾಪಾರಿ ಸಾವು

ಸುಳ್ಯ, ನ.05 : ಇಲ್ಲಿನ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೇ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುತ್ತಿದ್ದ ಸಂದರ್ಭ ಗೋಡೆ ಮಗುಚಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ. ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ಖಾದರ್ (48) ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಅವರು ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜುರಿ ವ್ಯಾಪಾರ ನಡೆಸುತ್ತಿದ್ದರು.
ಕಳೆದ ವರ್ಷಗಳಿಂದ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ ವ್ಯವಹಾರ ಸ್ಥಗಿತಗೊಳಿಸಿದ್ದು, ಹಳೆಯ ಕಟ್ಟಡದ ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದರು. ಅಬ್ದುಲ್ ಖಾದರ್ ಅವರು ತಮ್ಮ ಕೆಲಸದಾಳುಗಳೊಂದಿಗೆ ಇಂದು ಬೆಳಗ್ಗೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಟ್ರಸ್ ಅನ್ನು ಹಗ್ಗ ಹಾಕಿ ಎಳೆಯುತ್ತಿರುವ ಸಂದರ್ಭ ಗೋಡೆ ಮಗುಚಿ ಅಬ್ದುಲ್ ಖಾದರ್ ಅವರ ಮೇಲೆ ಬಿದ್ದಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಪೊಲೀಸರು, ಮಹಜರು ನಡೆಸಿದ್ದಾರೆ. ಮೃತದೇಹವನ್ನು ಪೋರ್ಸ್ಟ್‌ಮಾರ್ಟ್‌ಮ್‌ಗಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.