ಕರಾವಳಿ

ಕಾಪು: ದೀಪಾವಳಿ ಆಚರಣೆಯ ವೇಳೆ ಹಾವು ಕಡಿದು ಯುವಕ ಸಾವು..!

ಕಾಪು: ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನ. 11 ರ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ ಎಂದು ತಿಳಿದುಬಂದಿದೆ.

ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ಚೇತರಿಸಿಕೊಂಡಿದ್ದ ರೋಹಿತ್ ಅವರಿಗೆ ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು  ಹೀಗಾಗಿ ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!