ರಾಷ್ಟ್ರೀಯ
ದೆಹಲಿ ವಾಯು ಮಾಲಿನ್ಯ: ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಾಯು ಮಾಲಿನ್ಯ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ವಾಯು ಮಾಲಿನ್ಯ ಅಪಾಯಕಾರಿ ಹಂತ ತಲುಪಿದೆ. ಇದು ಕಳವಳ ಮೂಡಿಸಿದೆ.
ದೀಪಾವಳಿ ಹಬ್ಬದ ಬಳಿಕ ವಾಯು ಮಾಲಿನ್ಯ ಹೆಚ್ಚಾಗಿದೆ. ಇದರ ಜತೆಗೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭತ್ತದ ಕಟಾವಿನ ಬಳಿಕ ಗದ್ದೆಗೆ ಬೆಂಕಿ ಹಚ್ಚುತ್ತಿರುವುದು ಕೂಡ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಇನ್ನೊಂದೆಡೆ ಕೊರೋನಾ ಬಳಿಕ ದೆಹಲಿಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿದೆ. ದಾಖಲೆ ಸಂಖ್ಯೆಯ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.