ಆನ್ ಲೈನ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಕೆಯ ಶಂಕು ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ !

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ರಾಜ್ಯ ಪ್ರವಾಸದ ಬದಲಾಗಿ ಆನ್ ಲೈನ್ ಮೂಲಕವೇ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಿರುವಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆ ಸಮಾರಂಭವನ್ನು ಆನ್ ಲೈನ್ ಮೂಲಕವೇ ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರ ಉದ್ಘಾಟನೆ ಮಾಡಿದರು.
ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿ ಉದ್ಘಾಟನೆಯನ್ನು ಇದೇ ವೇಳೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.