ರಾಷ್ಟ್ರೀಯ
ಖ್ಯಾತ ಇತಿಹಾಸಕಾರ ಬಾಬಾ ಸಾಹೇಬ್ ಪುರಂದರೆ ಇನ್ನಿಲ್ಲ

ಮುಂಬೈ: ಖ್ಯಾತ ಇತಿಹಾಸಕಾರ ಬಾಬಾ ಸಾಹೇಬ್ ಪುರಂದರೆ ನಿಧನಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.
ಪದ್ಮ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಟಿತ ಪ್ರಶಸ್ತಿಗಳನ್ನು ನೀಡಿ ಅವರನ್ನು ಗೌರವಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇತಿಹಾಸಕಾರ ಪುರಂದರೆ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಪುರಂದರೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.