ಕರಾವಳಿ
ಮುಲ್ಕಿ: ಕಣಜದ ಹುಳು ದಾಳಿಗೆ 6 ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ಸಿಬ್ಬಂದಿ ಮೃತ್ಯು

ಮೂಲ್ಕಿ:ಕಣಜದ ಹುಳುವಿನ ದಾಳಿಯಿಂದ,ತನ್ನ ಜೀವ ಪಣಕಿಟ್ಟು ಆರು ವಿದ್ಯಾರ್ಥಿಗಳ ಜೀವ ಉಳಿಸಿದ ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರದ ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರಾಗಿದ್ದು,ಇವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.
ಸಂತೋಷ್ ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಗೊಳಗಾಗಿ ಕಿನ್ನಿಗೋಳಿ ಪರಿಸರದ ಶಾಲೆಯ ಕೆಲ ಮಕ್ಕಳು ಗಂಭೀರಾವಸ್ಥೆಯಲ್ಲಿದ್ದುದನ್ನು ಕಂಡು,ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.