ವಿಶೇಷ ಲೇಖನಗಳು

ಅಂಚೆ ಇಲಾಖೆಯಲ್ಲಿ ನೇಮಕಾತಿ: 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪೋಸ್ಟಲ್ ಸರ್ಕಲ್ ನಲ್ಲಿ 60 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುತ್ತಿದೆ.
1) ಮಲ್ಟಿ ಟಾಸ್ಕಿಂಗ್ ಸ್ಟಾಫ್
2) ಪೋಸ್ಟ್‌ಮ್ಯಾನ್,
3) ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು
4) ಪೋಸ್ಟಲ್ ಅಸಿಸ್ಟೆಂಟ್ ಹುದ್ದೆ

ಆಸಕ್ತ ಅರ್ಹ ಅಭ್ಯರ್ಥಿಗಳಿಂದ ‘ಆಫ್‌ಲೈನ್’ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನ : ಡಿಸೆಂಬರ್ 31, 2021

Postal Circle ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 13 ಹುದ್ದೆಗಳು
ಪೋಸ್ಟ್‌ಮ್ಯಾನ್ – 5 ಹುದ್ದೆಗಳು
ಸಾರ್ಟಿಂಗ್ ಅಸಿಸ್ಟೆಂಟ್ – 11 ಹುದ್ದೆಗಳು
ಪೋಸ್ಟಲ್ ಅಸಿಸ್ಟೆಂಟ್ – 31 ಹುದ್ದೆಗಳು

ಒಟ್ಟು 60 ಹುದ್ದೆಗಳು

ವಿದ್ಯಾರ್ಹತೆ : 12ನೇ ತರಗತಿ, 10ನೇ ತರಗತಿ

ವಯೋಮಿತಿ :
ಕನಿಷ್ಟ 18 ರಿಂದ ಗರಿಷ್ಟ 27 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ :
ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ :
ಮಾಸಿಕ 18,000/-ರಿಂದ 81,100/-ರೂಗಳ ವರೆಗೆ ವೇತನ ನೀಡಲಾಗುವುದು.

ಅರ್ಜಿ ಶುಲ್ಕ :
100/-ರೂ ಅರ್ಜಿ ಶುಲ್ಕವನ್ನು ಡಿಸೆಂಬರ್ 21,2021ರೊಳಗೆ ಪಾವತಿಸಬೇಕು.

ಅರ್ಜಿ ಸಲ್ಲಿಕೆ :
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆ ಪಡೆದುಸೂಕ್ತ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2021ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಕಳುಹಿಸವ ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
Assistant Director (Recruitment),
5th Floor, O/O the Chief Postmaster General,
Bihar Circle,
Patna – 800001.

Related Articles

Leave a Reply

Your email address will not be published. Required fields are marked *

Back to top button
error: Content is protected !!