ಕರಾವಳಿ
ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ರಿ.), ಮಲ್ಪೆ ಇದರ 30ನೇ ವಾರ್ಷಿಕ ಮಹಾಸಭೆ

ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ರಿ.), ಮಲ್ಪೆ ಇದರ 30ನೇ ವಾರ್ಷಿಕ ಮಹಾಸಭೆ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಂಘದ ಸದಸ್ಯರುಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಸಮಾರಂಭ ಇಂದು ದಿನಾಂಕ 01-12-2021 ರಂದು ನಡೆಯಿತು. ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಕುಂದರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ವಿವಿಧ ಸಂಘ ಸಂಸ್ಥೆಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.