ಕರಾವಳಿ

ಕೋಟ : ಯುವಕ ನಾಪತ್ತೆ

ಕೋಟ : ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಕೋಟದಲ್ಲಿ ನಡೆದಿದೆ.

ಅಭಿಷೇಕ ದೇವಾಡಿಗ (21) ನಾಪತ್ತೆಯಾಗಿರುವ ಯುವಕ. ಕಳೆದ 15 ದಿನಗಳಿಂದ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದ ಇವರು ನ.29 ರಂದು ಬೆಳಿಗ್ಗೆ 9.30 ರ ಸುಮಾರಿಗೆ ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದರು. ಮಧ್ಯಾಹ್ನ ಸಂಬಂಧಿ ರೂಪಾರವರು ಅಭಿಷೇಕ ಅವರಿಗೆ ಮೊಬೈಲ್ ಗೆ ಕರೆ ಮಾಡಿದಾಗ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಆದರೆ ಈವರೆಗೂ ಪತ್ತೆಯಾಗಿಲ್ಲ. ಇವರ ಬಗ್ಗೆ ನೆರೆಕೆರೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ಬಗ್ಗೆ ಅಭಿಷೇಕ ತಂದೆ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!