ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶಾದ್ಯಂತ ಕೊರೋನಾ
ಏರುಮುಖವಾಗಿದ್ದು, ಸೋಂಕಿನ ಪ್ರಕರಣಗಳು
ದಿನೇದಿನೆ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 3,688 ಹೊಸ ಪ್ರಕರಣಗಳು ಪತ್ತೆಯಾಗಿವೆ. 50 ಮಂದಿ ಸಾವನ್ನಪ್ಪಿದ್ದಾರೆ.
ನಿನ್ನೆ 3,377 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಒಂದು ದಿನದ ಈ ಅವಧಿಯಲ್ಲಿ 2,496 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ
ಒಟ್ಟು 18,684 ಸಕ್ರಿಯ ಪ್ರಕರಣಗಳಿವೆ.
ಭಾರತದ ದೈನಂದಿನ ಪಾಸಿಟಿವಿಟಿ ದರ ಪ್ರಸ್ತುತ ಶೇ
0.74ಕ್ಕೆ ತಲುಪಿದೆ. ಶುಕ್ರವಾರ ಶೇ 0.71 ಇತ್ತು.