ಕರಾವಳಿ
ದೇವಾಡಿಗರ ಸುಧಾರಕ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ರೂ.

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಕಾರ್ಕಳ ದೇವಾಡಿಗರ ಸುಧಾರಕ ಸಂಘದ ಕಟ್ಟಡದ ನಿರ್ಮಾಣಕ್ಕೆ ಮಂಜೂರುಗೊಳಿಸಿದ 3 ಲಕ್ಷ ರೂ. ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಭಾಸ್ಕರ್ ವಿ. ಅವರು ಡಿ. 4ರಂದು ಸಂಘದ ಪ್ರಮುಖರಿಗೆ ಹಸ್ತಾಂತರಿಸಿದರು.
ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹೆಗ್ಡೆ, ಹೆಬ್ರಿ ಸಿಟಿ ಒಕ್ಕೂಟದ ಅಧ್ಯಕ್ಷ ರಾಜೇಶ್ ಆಚಾರ್ಯ, ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ, ಹೆಬ್ರಿ ದೇವಾಡಿಗರ ಸುಧಾರಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.