ರಾಷ್ಟ್ರೀಯ
ಭಾರತ- ದಕ್ಷಿಣ ಆಫ್ರಿಕಾ ಟಿ- 20 ಪಂದ್ಯ ಮುಂದೂಡಿಕೆ

ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ- 20 ಪಂದ್ಯವನ್ನು ಮುಂದೂಡಲಾಗಿದೆ. ಏಕದಿನ ಮತ್ತು ಟೆಸ್ಟ್ ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ.
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಬಿಸಿಸಿಐ ಈ ತೀರ್ಮಾನ ತೆಗೆದುಕೊಂಡಿದೆ. ಬಿಸಿಸಿಐ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಸಲಾಗಿದೆ.
ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳಸಲಿದೆ ಭಾರತ ದಕ್ಷಿಣ ಆಫ್ರಿಕಾದಲ್ಲಿ ಮೂರು ಏಕದಿನ ಮತ್ತು ಮೂರು ಟೆಸ್ಟ್ ಪಂದ್ಯ ಆಡಲಿದೆ