ರಾಜ್ಯ

ಹಿರಿಯ ನಟ ಎಸ್. ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ (83) ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂ ಕುಸಿದುಬಿದ್ದಿದ್ದರು. ಇದರಿಂದ ಅವರ ತಲೆಗೆ ತೀವ್ರವಾದ ಪೆಟ್ಟಾಗಿತ್ತು. ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

1938 ಜನವರಿ 28ರಂದು ಬೆಂಗಳೂರಿನ ಚೂಡಸಂದ್ರದಲ್ಲಿ ಜನಿಸಿದ್ದ ಶಿವರಾಂ, ಕನ್ನಡ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 ದಶಕಗಳ ಕಾಲ ಜನಮನ ರಂಜಿಸಿದ್ದರು. ಅವರು ಕಿರುತೆರೆಯ ಕಾರ್ಯಕ್ರಮಗಳಲ್ಲೂ ನಟಿಸಿದ್ದರು.

1965 ರಲ್ಲಿ ಬೆರೆತ ಜೀವ ಸಿನಿಮಾ ಮೂಲಕ ಶಿವರಾಂ ಚಿತ್ರರಂಗ ಪ್ರವೇಶಿಸಿದ್ದರು. ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟರ ಜೊತೆ ಶಿವರಾಂ ಬಣ್ಣ ಹಚ್ಚಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!