ಉಡುಪಿ ಶ್ರೀ ಕೃಷ್ಣನಿಗೆ ಸಮರ್ಪಣೆಗೊಂಡ “ಉಡುಪಿ ಕೇದಾರ ಕಜೆ”

ಕೇದಾರೊತ್ಥಾನ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಹೆಸರಿನಲ್ಲಿ ಮಾರುಕಟ್ಟೆಗೆ ಬರಲಿದ್ದು, ಸುಮಾರು 100 ಕೆ.ಜಿ ಭತ್ತವನ್ನು ಬೆಳ್ತಿಗೆ ಅಕ್ಕಿಯನ್ನಾಗಿ ಮಾಡಿ ಇಂದು ದಿನಾಂಕ 07-12-2021 ರಂದು ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಉಡುಪಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಿ ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸೋಲೂರು ಆರ್ಯ ಈಡಿಗ ಸಂಸ್ಥಾನದ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಟ್ರಸ್ಟ್ ನ ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.