ಕರಾವಳಿ
ಕಾಪು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಕಾಪು : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನ ಏಣಗುಡ್ಡೆ ಗ್ರಾಮದಲ್ಲಿ ನಡೆದಿದೆ.
ಈ ಬಗ್ಗೆ ಜೋಸ್ ಫಿನ್ ಲೋಬೋ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಸೆ.9 ರಿಂದ ಅ.25 ರ ನಡುವಿನ ಅವಧಿಯಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ 4,12,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಮನೆಯಲ್ಲಿ ಚಿನ್ನಾಭರಣಗಳು ಕಳವಾಗಿರುವ ಬಗ್ಗೆ ತನ್ನ ಮಕ್ಕಳಿಗೆ ವಿಷಯ ತಿಳಿಸಿ ಮನೆಯಲ್ಲೆಲ್ಲಾ ಹುಡುಕಾಡಿ ದೂರು ನೀಡುವುದು ತಡವಾಗಿರುತ್ತದೆ ಎಂದು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.