ರಾಜ್ಯ

ಪೂರ್ಣ ಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಬರಹಗಾರ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿಯವರು (84) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1937 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದ ಅವರು ಮೈಸೂರು ಮಾನಸ ಗಂಗೋತ್ರಿಯಲ್ಲಿ ತತ್ವಶಾಸ್ತ್ರದಲ್ಲಿ ಆನರ್ಸ್ ಮಾಡಿದ್ದರು. 1966ರಲ್ಲಿ ಪೂರ್ಣಚಂದ್ರ ತೇಜಸ್ವಿ ಅವರೊಂದಿಗೆ ವಿವಾಹವಾಗಿದ್ದ ಅವರು, ತೇಜಸ್ವಿ ಕುರಿತು “ನನ್ನ ತೇಜಸ್ವಿ” ಎಂಬ ಕೃತಿಯನ್ನು ಬರೆದಿದ್ದರು.

ರಾಜೇಶ್ವರಿ ಪೂರ್ಣಚಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಖ್ಯಾತ ಸಾಹಿತಿ ದಿವಂಗತ ಪೂರ್ಣಚಂದ್ರ ತೇಜಸ್ವಿಯವರ ಧರ್ಮಪತ್ನಿ ಶ್ರೀಮತಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರ ನಿಧನ ವಾರ್ತೆ ತಿಳಿದು, ತುಂಬಾ ದುಃಖ ವಾಗಿದೆ. ಸರಳರೂ, ಸಹೃದಯಿಗಳು ಆಗಿದ್ದ ರಾಜೇಶ್ವರಿ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ, ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!