ಕರಾವಳಿ

ವಾರಾಂತ್ಯ ಕರ್ಫ್ಯೂ: ಆ.14 ಮತ್ತು ಆ. 28ರ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 14-08-2021 ಮತ್ತು 28-08-2021ರಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯನ್ನು ಆಗಸ್ಟ್ 12ರಂದು ಮಂಗಳೂರು ವಿವಿಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!