ಕರಾವಳಿ
ಉಡುಪಿಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಕಂಡೆಕ್ಟರ್ ಹೃದಯಾಘಾತದಿಂದ ಮೃತ್ಯು

ಉಡುಪಿ: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಕರ್ತವ್ಯದಲ್ಲಿದ್ದಾಗಲೇ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ನಡೆದಿದೆ.43 ವರ್ಷದ ವಿಜಯ್ ಮೃತ ನಿರ್ವಾಹಕ.
ವಿಜಯ್ ಚಿಕ್ಕಮಗಳೂರು-ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳಿಗ್ಗೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟಿದೆ. ಮಾರ್ಗ ಮಧ್ಯೆಯೇ ನಿರ್ವಾಹಕ ವಿಜಯ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆರೀಫ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಿಸದೇ ಅಲ್ಲಿ ವಿಜಯ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.