ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ ನಿಧನ..!!
ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ ವಲಯ) ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ (55) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ನಿನ್ನೆ ನಿಧನರಾದರು.
ಪ್ರವೀಣ್ ಶೆಟ್ಟಿ ಅವರು ಪ್ರಸಕ್ತ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹಾಗೂ ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಅವರು ಈ ಹಿಂದೆ ಉಡುಪಿ ತಾ.ಪಂ. ಸದಸ್ಯರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನಗಲಿದ್ದಾರೆ. ಅವರ ನಿಧನಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ದಿವಾಕರ್ ಕುಂದರ್, ನರಸಿಂಹ ಮೂರ್ತಿ, ರಮೇಶ್ ಕಾಂಚನ್, ಹರೀಶ್ ಕಿಣಿ, ಸದಾಶಿವ ಕಟ್ಟೆಗುಡ್ಡೆ, ಅಲೆವೂರು ಗ್ರಾ.ಪಂ. ಅಧ್ಯಕ್ಷೆ ಪುಷ್ಪಾ ಅಂಚನ್ ಮತ್ತು ಉಪಾಧ್ಯಕ್ಷ ಸುಧಾಕರ ಪೂಜಾರಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಭಾನುವಾರ ಬೆಳಿಗ್ಗೆ 9:30ಕ್ಕೆ ಉಡುಪಿ ನಾಯರ್ ಕೆರೆಯ ಕಾಂಗ್ರೆಸ್ ಭವನದಲ್ಲಿ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು.
12 : 00ಕ್ಕೆ ಪ್ರವೀಣ್ ಶೆಟ್ಟಿ ಅವರ ಕೊರಂಗ್ರಪಾಡಿಯ ಸ್ವಗ್ರಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.