ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ “ಆಟಲ್ ಟ್ರೋಫಿ – 2021” ಉದ್ಘಾಟನಾ ಸಮಾರಂಭ
ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಉಡುಪಿ ನಗರ ಯುವ ಮೋರ್ಚಾ ಹಾಗೂ ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಇವರ ಆಶ್ರಯದಲ್ಲಿ ದಿನಾಂಕ 25-12-2021 ರಂದು ಆಯೋಜಿಸಲಾದ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಕೂಟ “ಅಟಲ್ ಟ್ರೋಫಿ 2021” ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು, ಸಂಸದರಾದ ತೇಜಸ್ವಿ ಸೂರ್ಯ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಡಾll. ಸಂದೀಪ್, ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಕಾರ್ಯದರ್ಶಿಗಳಾದ ಶ್ವೇತಾ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ನಗರ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಇದರ ಅಧ್ಯಕ್ಷರಾದ ದಿನೇಶ್ ಕುಂದರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಕಾರ್ಯಕ್ರಮದ ಸಂಚಾಲಕರಾದ ಸುವರ್ಧನ್ ನಾಯಕ್ ಹಾಗೂ ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಇದರ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.