ಕರಾವಳಿ

ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ: ಪ್ರಾಂಶುಪಾಲರ ಸಭೆ

ಉಡುಪಿ: ವಿದ್ಯಾರ್ಥಿಗಳು ಮತ್ತು ಪಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಲೇಜುಗಳು ವಿದ್ಯಾರ್ಥಿಗಳಿಗಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಅಗತ್ಯವೆಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ದೇವಜ್ಯೋತಿ ರೇ ಹೇಳಿದರು.

ಅವರು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ ಉಡುಪಿ ಜಿಲ್ಲಾ ಪದವಿ ಕಾಲೇಜು ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡುತ್ತಿದ್ದರು

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕಾಲೇಜುಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ವಿವರಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.

ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ, ಇದಕ್ಕೆ ಸಾಮರಸ್ಯದ ವಾತಾವರಣ ಅಗತ್ಯ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ನವೀನ್ ಭಟ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳು ಕೋವಿಡ್ ಸುರಕ್ಷತಾ ಕ್ರಮ ಕೈಗೊಳ್ಳುವುದು, ಸಿ.ಸಿ. ಕ್ಯಾಮರಾ ಅಳವಡಿಸುವುದು. ಪಾಲಕರ ಸಭೆಗಳನ್ನು ಆಗಾಗ ನಡೆಸುವುದು, ಕಾಲೇಜುಗಳಲ್ಲಿ ಶಿಸ್ತು ಸಮಿತಿಗಳನ್ನು ರಚಿಸಿ ಆಗಾಗ ಸಭೆ ನಡೆಸುವುದು, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ಅಪರಾಧ ತಡೆ ಕುರಿತಾಗಿ ತರಬೇತಿ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!