ಉಡುಪಿ ಕೃಷ್ಣಾಪುರ ಮಠದ ಪರ್ಯಾಯೋತ್ಸವ ಪೂರ್ವ ತಯಾರಿಯ ಬಗ್ಗೆ ಪೂಲೀಸ್ ಅಧಿಕಾರಿಗಳೊಂದಿಗೆ ಸಭೆ

ಉಡುಪಿ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರ ಚತುರ್ಥ ಪರ್ಯಾಯ ಮಹೋತ್ಸವ ಸನಿಹವಾಗುತ್ತಿದ್ದು, ಪರ್ಯಾಯ ಮಹೋತ್ಸವದಲ್ಲಿ ಅನೇಕ ಗಣ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ಸೂಕ್ತ ಭದ್ರತೆ ಹಾಗೂ ವಾಹನ ನಿಲುಗಡೆಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಇಂದು ದಿನಾಂಕ 04-01-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೋಲಿಸ್ ಉಪ ಅಧೀಕ್ಷಕರಾದ ಸುಧಾಕರ್ ನಾಯ್ಕ್, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಉಪ ಅಧೀಕ್ಷಕರಾದ ರಾಘವೇಂದ್ರ, ಉಡುಪಿ ನಗರ ಪೊಲೀಸ್ ನಿರೀಕ್ಷಕರಾದ ಪ್ರಮೋದ್, ಮಣಿಪಾಲ ವೃತ್ತ ನಿರೀಕ್ಷಕರಾದ ಮಂಜುನಾಥ್ ಎಂ, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣ ಗೌಡ, ಸಂಚಾರಿ ಪೊಲೀಸ್ ಉಪ ನಿರೀಕ್ಷಕರಾದ ಅಬ್ದುಲ್ ಖಾದರ್ ಹಾಗೂ ಪರ್ಯಾಯೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.