ರಾಜ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಾಗೂ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೊರೋನಾ ಪಾಸಿಟಿವ್..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಹಾಗೂ ಮಂಗಳೂರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎರಡನೆ ಬಾರಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ, ಸಾಮಾಜಿಕ ಜಾಲ ತಾಣದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಹಿಂದೆ ಕೂಡ ಕಟೀಲ್ ಕೊರೋನಾ ಸೋಂಕಿಗೆ ತುತ್ತಾಗಿದ್ದರು.
ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನ್ನ ಜತೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿಕೊಳ್ಳಿ ಎಂದು ಕಟೀಲ್ ಮನವಿ ಮಾಡಿದ್ದಾರೆ.
ಕಂದಾಯ ಸಚಿವ ಆರ್ ಅಶೋಕ್, ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.