ರಾಜ್ಯ
ಮೈಸೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ತಾಲೂಕು ಮತ್ತು ನಗರದ ಶಾಲೆಗಳಿಗೆ ಜಿಲ್ಲಾಧಿಕಾರಿ ಗೌತಮ್ ಬಗಾದಿ ರಜೆ ಘೋಷಿಸಿದ್ದಾರೆ.
ಮುಂದಿನ ಆದೇಶದ ತನಕ ಶಾಲೆಗಳು ಬಂದ್ ಆಗಲಿವೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈಗಾಗಲೇ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡುವ ಅಧಿಕಾರವನ್ನು ಸರ್ಕಾರ ಸ್ಥಳೀಯ ಆಡಳಿತಕ್ಕೆ ನೀಡಿದೆ.