ಕರಾವಳಿ
ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ ಹಾಗೂ ಆಜಾದ್ ಕಾ ಅಮೃತ್ ಮಹೋತ್ಸವದ ಅಂಗವಾಗಿ “ಯುವ ಸಪ್ತಾಹ” ಕಾರ್ಯಕ್ರಮ

ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ, ಪ್ರಾಧಿಕಾರ, ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ರಜತಾದ್ರಿ ವಾಜಪೇಯಿ ಸಭಾಂಗಣ, ಮಣಿಪಾಲ ಇಲ್ಲಿ ಇಂದು ದಿನಾಂಕ 12-01-2022 ರಂದು ಆಯೋಜಿಸಲಾದ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ ಹಾಗೂ ಆಜಾದ್ ಕಾ ಅಮೃತ್ ಮಹೋತ್ಸವದ ಅಂಗವಾಗಿ “ಯುವ ಸಪ್ತಾಹ” ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಲ್ಫ್ರೆಡ್, ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.