ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ದಾಳಿ- ಎಂಜಿನಿಯರ್ ಸಹಿತ ಮೂವರ ಎಸಿಬಿ ವಶಕ್ಕೆ..!

ಉಡುಪಿ : ಉಡುಪಿ ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರದ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ. ದಾಳಿಯ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್ ಬಳಿ ಲಂಚ ಪಡೆದಿದ್ದ 2.50 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಎಸ್ಪಿ ಸೈಮನ್, ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ಎಸಿಬಿ ಎಸ್ಐ ಸತೀಶ್, ರಫೀಕ್ ಎಂ ಅವರ ತಂಡ ದಾಳಿ ನಡೆಸಿದ್ದು, ತನಿಖೆ ಮುಂದುವರೆದಿದೆ.