ಕರಾವಳಿ
ಕ್ರೀಡಾ ಭಾರತಿ, ಉಡುಪಿ ಜಿಲ್ಲೆ ಇದರ “ಜಿಲ್ಲಾ ಕ್ರೀಡಾ ಸಮ್ಮೇಳನ 2021 ರ ಪೂರ್ವಭಾವಿ ಸಭೆ

ಕ್ರೀಡಾ ಭಾರತಿ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕ್ರೀಡಾ ಸಮ್ಮೇಳನ 2021 ನಡೆಸುವ ಸಂಬಂಧ ಇಂದು ದಿನಾಂಕ 22-11-2021 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಸಭೆಯಲ್ಲಿ ಕ್ರೀಡಾ ಭಾರತಿ, ಉಡುಪಿ ಜಿಲ್ಲೆಯ ಗೌರವಾಧ್ಯಕ್ಷರಾಗಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಅಧ್ಯಕ್ಷರಾಗಿ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್, ಜೊತೆ ಕಾರ್ಯದರ್ಶಿಯಾಗಿ ದಿನೇಶ್, ಕಾರ್ಯದರ್ಶಿಯಾಗಿ ರೋಷನ್ ಶೆಟ್ಟಿ, ಉಪಾಧ್ಯಕ್ಷರಾಗಿ ಯಶ್ ಪಾಲ್ ಸುವರ್ಣ, ರೋಹಿತ್ ಕುಮಾರ್ ಕಟೀಲ್ ಮತ್ತು ವಿವಿಧ ಸಂಘದ ಅಧ್ಯಕ್ಷರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಸಮಿತಿಯನ್ನು ರಚಿಸಿ ಜನವರಿ 02 ರಂದು ಜಿಲ್ಲಾ ಕ್ರೀಡಾ ಸಮ್ಮೇಳನ 2021 ನಡೆಸುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾ ಭಾರತಿ, ಉಡುಪಿ ಜಿಲ್ಲೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.