ಕರಾವಳಿ

ಉಡುಪಿ ಪರ್ಯಾಯ ಮಹೋತ್ಸವ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ: ಜಿಲ್ಲೆಯಲ್ಲಿ ಜನವರಿ 17 ಮತ್ತು 18 ರಂದು ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸುಗಮ ಸಂಚಾರದ ಕುರಿತು ವಾಹನ ಸಂಚಾರ ನಿಷೇಧ ಮತ್ತು ಬದಲಿ ರಸ್ತೆ ಸಂಚಾರ ಮಾರ್ಗದ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಈ ಕೆಳಗಿನಂತೆ ಆದೇಶಿಸಿದ್ದಾರೆ.

ಮಂಗಳೂರು ಕಡೆಯಿಂದ ಉಡುಪಿ, ಮಣಿಪಾಲ ಕಡೆಗೆ ಬರುವಂತಹ ವಾಹನಗಳು: ಜನವರಿ 17 ರ ಮಧ್ಯಾಹ್ನ 2 ರಿಂದ ಜನವರಿ 18 ರ ಬೆಳಗ್ಗೆ 7 ಗಂಟೆಯವರೆಗೆ ನೇರವಾಗಿ ರಾ.ಹೆ. 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ನಂತರ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು ಮುಂದುವರೆದು ಮಣಿಪಾಲಕ್ಕೆ ಹೋಗುವುದು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸಂಜೆ 7 ರಿಂದ ಬೆಳಗ್ಗೆ 7 ರ ವರೆಗೆ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ಮಂಗಳೂರು ಕಡೆಗೆ ರಾ.ಹೆ. 66 ರಲ್ಲಿ ಅಂಬಲಪಾಡಿ, ಬಲಾಯಿಪಾದೆ ಮುಖೇನ ಹೋಗಬೇಕು.

ಮಣಿಪಾಲಕ್ಕೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್‌ನಿಂದ ಮುಂದಕ್ಕೆ ಸಾಗಿ ಅಂಬಾಗಿಲು ಮುಖೇನ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಕುಂದಾಪುರ ಕಡೆಯಿಂದ ಉಡುಪಿ, ಮಣಿಪಾಲ ಕಡೆಗೆ ಬರುವಂತಹ ವಾಹನಗಳು: ಜನವರಿ 17 ರಂದು ಸಂಜೆ 7 ಗಂಟೆಯವರೆಗೆ ಕುಂದಾಪುರ, ಬ್ರಹ್ಮಾವರ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವ ಎಲ್ಲಾ ವಾಹನಗಳು ಅಂಬಾಗಿಲು ಮೂಲಕ ರಾ.ಹೆ.66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ, ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯವರೆಗೆ ಕುಂದಾಪುರದಿಂದ ಉಡುಪಿ ನಗರಕ್ಕೆ ಆಗಮಿಸುವ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಸಂತೆಕಟ್ಟೆ ಮೂಲಕ ಕುಂದಾಪುರ ಕಡೆಗೆ ಹೋಗುವುದು.

ಮಣಿಪಾಲಕ್ಕೆ ಹೋಗುವ ವಾಹನಗಳು ಅಂಬಾಗಿಲು ಮೂಲಕ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಉಡುಪಿ ನಗರಕ್ಕೆ ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವಂತಹ ವಾಹನಗಳು: ಜನವರಿ 17 ರಂದು ಸಂಜೆ 7 ಗಂಟೆಯವರೆಗೆ ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವಂತಹ ವಾಹನಗಳು ಚಿಟ್ಪಾಡಿ, ಬೀಡಿನಗುಡ್ಡೆ, ಶಾರದ ಕಲ್ಯಾಣ ಮಂಟಪ, ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸಂಜೆ 7 ರಿಂದ ಬೆಳಗ್ಗೆ 7 ರ ವರೆಗೆ ಬೀಡಿನಗುಡ್ಡೆ, ಚಿಟ್ಪಾಡಿ ಮೂಲಕ ಮಿಷನ್‌ ಕಂಪೌಡ್ ರಸ್ತೆ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ವಾಪಾಸು ಹಿಂತಿರುಗಬೇಕು.

ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ ವಾಹನಗಳು: ಜನವರಿ 17 ರಂದು ಸಂಜೆ 7 ಗಂಟೆಯವರೆಗೆ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವಂತಹ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವೀಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ವರೆಗೆ ಮಣಿಪಾಲ, ಸಿಂಡಿಕೇಟ್ ಸರ್ಕಲ್ ನಿಂದ ಕಾಯಿನ್ ಸರ್ಕಲ್, ಪೆರಂಪಳ್ಳಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್ ಆಗಮಿಸಿ, ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಮಂಗಳೂರು-ಮುಂಬೈ-ಬೆಂಗಳೂರಿಗೆ ಹೋಗುವ ವಾಹನಗಳು: ಜನವರಿ 17 ರಂದು ಸಂಜೆ 7 ಗಂಟೆಯವರೆಗೆ ಮಂಗಳೂರಿನಿಂದ ಮುಂಬೈ ಕಡೆಗೆ ಮತ್ತು ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ, ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೈಪಾದೆ, ಅಂಬಲಪಾಡಿ, ಕರಾವಳಿ ಜಂಕ್ಷನ್, ಬನ್ನಂಜೆ, ಸಿಟಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಕರೆದುಕೊಂಡು ಅದೇ ಮಾರ್ಗವಾಗಿ ಪ್ರಯಾಣವನ್ನು ಮುಂದುವರೆಸಬೇಕು.

ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಸಂಜೆ 7 ರಿಂದ ಬೆಳಗ್ಗೆ 7 ರ ವರೆಗೆ ಮುಂಬೈ, ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ, ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಕರಾವಳಿ ಜಂಕ್ಷನ್ ಅಂತಿಮಗೊಳಿಸಿ ಅಲ್ಲಿಯೇ ಎರಡೂ ಬದಿಯ ಸರ್ವೀಸ್ ರಸ್ತೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಮುಂಬೈ ಹಾಗೂ ಬೆಂಗಳೂರಿಗೆ ಪ್ರಯಾಣ ಮುಂದುವರೆಸಬೇಕು.

ಮಲ್ಪೆ ಕಡೆಯಿಂದ ಉಡುಪಿಗೆ ಬರುವಂತಹ ವಾಹನಗಳು: ಜನವರಿ 17 ರಂದು ಸಂಜೆ 6 ಗಂಟೆಯವರೆಗೆ ಮಲ್ಪೆಯಿಂದ ಬರುವ ಎಲ್ಲಾ ಬಸ್ಸುಗಳು, ಆದಿ ಉಡುಪಿ, ಕರಾವಳಿ ಜಂಕ್ಷನ್, ಬನ್ನಂಜೆ ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸಬೇಕು.

ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಸಂಜೆ 7 ರಿಂದ ಬೆಳಗ್ಗೆ 7 ರ ವರೆಗೆ ಮಲ್ಪೆ ಕಡೆಯಿಂದ ಬರುವಂತಹ ಎಲ್ಲಾ ವಾಹನಗಳು ಆದಿಉಡುಪಿ ಜಂಕ್ಷನ್ ವರೆಗೆ ಆಗಮಿಸಿ, ನಂತರ ವಾಪಾಸು ಅದೇ ಮಾರ್ಗದಲ್ಲಿ ಮಲ್ಪೆ ಕಡೆಗೆ ಹಿಂತಿರುಗಬೇಕು.

ಮಂಗಳೂರು, ಕುಂದಾಪುರ ಕಡೆಗೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್ ಮೂಲಕ ಹಾದು ಹೋಗಬೇಕು.

ಪರ್ಯಾಯೋತ್ವದ ಅಂಗವಾಗಿ ವಾಹನ ನಿಲುಗಡೆ ನಿಷೇಧ ಮಾಡಲಾದ ಸ್ಥಳಗಳು: ಜನವರಿ 17 ರಂದು ಮಧ್ಯಾಹ್ನ 2 ಗಂಟೆಯಿಂದ ಜನವರಿ 18 ರ ಬೆಳಗ್ಗೆ 7 ರ ವರೆಗೆ ಅಂಬಲಪಾಡಿಯಿಂದ ಜೋಡುಕಟ್ಟೆಯವರೆಗೆ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನಗಳನ್ನು, ಬ್ರಹ್ಮಗಿರಿಯಿಂದ ಬನ್ನಂಜೆವರೆಗೆ, ಲಯನ್ ಸರ್ಕಲ್‌ನಿಂದ ಮಿಷನ್ ಕಂಪೌಂಡ್‌ ವರೆಗೆ, ಬೇತಲ್ ಚರ್ಚ್ನಿಂದ ಸಿಂಡಿಕೇಟ್ ಸರ್ಕಲ್‌ವರೆಗೆ, ಸಿಂಡಿಕೇಟ್ ಸರ್ಕಲ್‌ನಿಂದ ತ್ರಿವೇಣಿ ಜಂಕ್ಷನ್ ತನಕ, ಹನುಮಾನ್ ಜಂಕ್ಷನ್‌ನಿಂದ ಸಂಸ್ಕೃತ ಕಾಲೇಜ್ ಜಂಕ್ಷನ್, ಕನಕದಾಸ ರಸ್ತೆಯ ಪಲಿಮಾರು ಮಠದ ಗೇಟ್ ವರೆಗೆ, ಸಿಟಿ ಸೆಂಟರ್‌ನಿಂದ ಚಿತ್ತರಂಜನ್ ಸರ್ಕಲ್, ಮಿತ್ರಾ ಆಸ್ಪತ್ರೆ ರಸ್ತೆ ತನಕ, ಐಡಿಯಲ್ ಜಂಕ್ಷನ್, ಎಲ್.ವಿ.ಟಿ ತೆಂಕಪೇಟೆ ದೇವಸ್ಥಾನ, ಪಿ.ಪಿ.ಸಿ ಕಾಲೇಜ್ ತನಕ, ಐಡಿಯಲ್ ಜಂಕ್ಷನ್‌ನಿಂದ ಹರಿಶ್ಚಂದ್ರ ಮಾರ್ಗ, ವಿದ್ಯೋದಯ ಶಾಲೆಯವರೆಗೆ, ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್ ಸ್ಥಳದವರೆಗೆ, ಓಶಿಯನ್ ಪರ್ಲ್ ಹೋಟೆಲ್‌ನಿಂದ ಕಟ್ಟೆ ಆಚಾರ್ಯ ಮಾರ್ಗ, ಮಥುರಾ ಹೋಟೆಲ್ ತನಕ, ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗಳಲ್ಲಿ ಯಾವುದೇ ವಾಹನ ಪ್ರವೇಶ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದ್ದು, ಪೇಜಾವರ ಮಠದ ಹಿಂಭಾಗದಲ್ಲಿ ಲಘು ಹಾಗೂ ದ್ವಿಚಕ್ರ ವಾಹನ ನಿಲುಗಡೆ ಮಾಡುತ್ತಿದ್ದು, ವುಡ್‌ಲ್ಯಾಂಡ್ ಹೋಟೆಲ್‌ನಿಂದ ಪೇಜಾವರ ಮಠದ ಹಿಂಭಾಗದವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಪುರಪ್ರವೇಶ ಹಾಗೂ ಹೊರೆಕಾಣಿಕೆಯ ದಿನದಂದು ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಲಿರುವುದರಿಂದ ಸುಗಮ ಸಂಚಾರದ ಬಗ್ಗೆ ತ್ರಿವೇಣಿ ಜಂಕ್ಷನ್‌ನಿಂದ, ಸಂಸ್ಕೃತ ಕಾಲೇಜ್, ಕನಕದಾಸ ರಸ್ತೆಯ ಪಲಿಮಾರು ಮಠದ ಗೇಟ್ ತನಕ ಜನವರಿ 10 ರಿಂದ 18 ರ ಸಂಜೆಯ ವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಜನವರಿ 17 ರ ಬೆಳಗ್ಗೆ 9 ಗಂಟೆಯಿಂದ ಜ. 18 ರ ಬೆಳಗ್ಗೆ 7 ಗಂಟೆಯವರೆಗೆ ಹೆಚ್ಚುವರಿಯಾಗಿ ಸ್ವಾಗತ ಗೋಪುರ, ಕಿನ್ನಿಮೂಲ್ಕಿ, ಗೋವಿಂದ ಕಲ್ಯಾಣ ಮಂಟಪ, ಜೋಡುಕಟ್ಟೆ ಲಯನ್ ಸರ್ಕಲ್, ಡಯಾನ ಸರ್ಕಲ್, ಮಿತ್ರ ಜಂಕ್ಷನ್, ಐಡಿಯಲ್ ಜಂಕ್ಷನ್, ತೆಂಕಪೇಟೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ನಿಷೇಧಿಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!