ಕರಾವಳಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಮಹಿಳಾ ಆರೋಗ್ಯ ತಪಾಸಣಾ ಶಿಬಿರ, ಸಾಧಕಿಯರಿಗೆ ಸನ್ಮಾನ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹಯೋಗದೊಂದಿಗೆ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಾ.8ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ನವಮಾಸ ವುಮನ್ಸ್ ಸ್ಪೆಷಾಲಿಟಿ ಕ್ಲಿನಿಕ್ ಕೋಟೇಶ್ವರ ಇದರ ವೈದ್ಯಾಧಿಕಾರಿ ಹಾಗೂ ಸ್ತ್ರೀರೋಗ ತಜ್ಞೆ ಡಾ! ಪ್ರಿಯಾಂಕ ಜೋಗಿ, ಸುನಾಗ್ ಹಾಸ್ಪಿಟಲ್ ಉಡುಪಿ ಇದರ ವೈದ್ಯಾಧಿಕಾರಿ ಹಾಗೂ ಅರವಳಿಕೆ ತಜ್ಞೆ ಡಾ! ವೀಣಾ ನರೇಂದ್ರ ಮತ್ತು ಶಿಲ್ಪಾ ರಘುಪತಿ ಭಟ್ ರವರು ಆರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ವೈದ್ಯಾಧಿಕಾರಿಗಳು ಮಹಿಳೆಯರ ಆರೋಗ್ಯ ಸಂರಕ್ಷಣೆ ಮತ್ತು ಆರೋಗ್ಯ ತಪಾಸಣೆಯ ಔಚಿತ್ಯದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. 

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಆರೋಗ್ಯವಂತ ಮಹಿಳೆಯಿಂದ ಸದೃಢ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಯಾವುದೇ ಜವಾಬ್ದಾರಿಯನ್ನು ಮಹಿಳೆ ಅತ್ಯಂತ ಸಮರ್ಪಕವಾಗಿ ನಿಭಾಯಿಸುತ್ತಾಳೆ ಎಂಬುದಕ್ಕೆ ಜಿಲ್ಲಾ ಮಹಿಳಾ ಮೋರ್ಚಾದ ಅನುಕರಣೀಯ ಮಾದರಿ ಕಾರ್ಯ ಚಟುವಟಿಕೆಗಳೇ ಸಾಕ್ಷಿ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ವಿಶ್ವದಾದ್ಯಂತ ಮಹಿಳೆಯರು ಸಮಾಜದ ವಿವಿಧ ರಂಗಗಳ ಮುಂಚೂಣಿಯಲ್ಲಿ ಯಶಸ್ವೀ ನಾಯಕಿಯರಾಗಿ ವಿಶಿಷ್ಠ ಸಾಧನೆಗೈಯುತ್ತಿದ್ದಾರೆ. ಸಾಮಾಜಿಕ ಹಾಗೂ ಕೌಟುಂಬಿಕವಾಗಿಯೂ ಸಹನೆ ಮತ್ತು ಸಹಬಾಳ್ವೆಯ ಯಶಸ್ವೀ ಬದುಕಿನಲ್ಲಿ ಮಹಿಳೆಯರ ಪಾತ್ರ ಅತ್ಯಂತ ಶ್ರೇಷ್ಠವಾಗಿದೆ ಎಂದರು. 

ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಡಾ! ವಿಜಯೇಂದ್ರ ರಾವ್ ಮಾತನಾಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯವನ್ನು ಕೋರಿದರು.

ವಿವಿಧ ರಂಗಗಳಲ್ಲಿ ವಿಶೇಷ ಸಾಧನೆಗೈದಿರುವ ವಿದ್ಯಾ ಸರಸ್ವತಿ ಉಡುಪಿ, ವೈದ್ಯಕೀಯ ಸಹಾಯಕಿಯಾಗಿ ವಿಶಿಷ್ಟ ಸಾಧನೆಗೈದಿರುವ ಉಜ್ವಲ ಕಿರಣ್ ಉಡುಪಿ ಮತ್ತು ಅಂತಾರಾಷ್ಟ್ರೀಯ ಈಜು ಪಟು ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿದ್ಯಾ ಪೈ ಕಾರ್ಕಳ ಇವರನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ! ವಿದ್ಯಾಧರ್ ಶೆಟ್ಟಿ, ಡಾ! ಶಿಲ್ಪಾ ಕುಂದಾಪುರ, ಜಿಲ್ಲಾ ವೈದ್ಯಕೀಯ ಪ್ರತಿನಿಧಿ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಮಧುಸೂದನ್ ಹೇರೂರು, ಮಹಿಳಾ ಮೋರ್ಚಾ ಕಾಪು ಮಂಡಲ ಅಧ್ಯಕ್ಷೆ ಸುಮಾ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಉಡುಪಿ ನಗರ ಕಾರ್ಯದರ್ಶಿ ದಯಾಶಿನಿ, ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲ ಸತೀಶ್, ಸುಧಾ ಪೈ ಹಾಗೂ ವೈದ್ಯಕೀಯ ಸಹಾಯಕ ಸಿಬ್ಬಂದಿಗಳು, ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಉಡುಪಿ ನಗರಸಭಾ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 150ಕ್ಕೂ ಮಿಕ್ಕಿ ಮಹಿಳಾ ಶಿಬಿರಾರ್ಥಿಗಳು ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಕೇಸರಿ ಯುವರಾಜ್ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!