ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ಭಜರಂಗದಳ ಸಂಪೂರ್ಣ ಬೆಂಬಲ: ಸುನೀಲ್ ಕೆ. ಆರ್.!

ಕಾರ್ಕಳ : ಕೇರಳದ ಕಮ್ಯುನಿಸ್ಟ್ ಸರಕಾರದ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಗೆ ಅವಕಾಶ ಸಿಗದಿರುವುದು ನೋವಿನ ಸಂಗತಿ. ಈ ನಿಟ್ಟಿನಲ್ಲಿ ಜನವರಿ 26 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಮೆರವಣಿಗೆಯ ಸ್ವಾಭಿಮಾನದ ನಡಿಗೆಗೆ ಬಜರಂಗದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ. ಆರ್. ತಿಳಿಸಿದ್ದಾರೆ.
ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣಗುರುಗಳು ಸಮಾಜದಲ್ಲಿ ಅಸಮಾನತೆ ನಿವಾರಣೆಗೋಸ್ಕರ, ಮೆಲ್ಜಾತಿ, ಕೆಳಜಾತಿ ಬೇಧಭಾವವನ್ನು ದೂರಮಾಡಲು ಹೋರಾಟ ಮಾಡಿದ ಸುಧಾರಣೆಯ ಹರಿಕಾರ.
ಜ. 26ರಂದು ನಡೆಯಲಿರುವ ಸ್ತಬ್ಧ ಚಿತ್ರದ ಮೆರವಣಿಗೆಗೆ ಬಜರಂಗದಳ ಬೆಂಬಲ ನೀಡಲಿದೆ. ಸಂಘಟನೆಯ ಎಲ್ಲ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿಸುತ್ತದೆ ಎಂದು ಸುನೀಲ್ ಕೆ. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ