ರಾಜ್ಯ

ಉಡುಪಿ, ದ.ಕ, ಉ.ಕ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ’ – ಬೊಮ್ಮಾಯಿ ಘೋಷಣೆ .

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ 31,980 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.

ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಸಮಿತಿ ತಿರಸ್ಕಾರ ಮಾಡಿರುವುದಕ್ಕೆ ದೇಶ, ರಾಜ್ಯದ್ಯಾಂತ ಅನೇಕ ಪ್ರತಿಭಟನೆಗಳು ನಡೆದಿದ್ದು, ಈ ವಿಚಾರ ಇದೀಗ ರಾಜಕೀಯವಾಗಿ ಭಾರೀ ಸದ್ದು ಮಾಡಿದ್ದು, ಇದೀಗ ನಾರಾಯಣ ಗುರು ಟ್ಯಾಬ್ಲೋ ವಿವಾದಕ್ಕೆ ರಾಜ್ಯ ಸರ್ಕಾರ ಮದ್ದು ಅರೆದಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಇನ್ನು ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!