ರಾಷ್ಟ್ರೀಯ
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ, ನಾಳೆ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಬೆಳಿಗ್ಗೆ 11 ಗಂಟೆಗೆ ಮಾತನಾಡಲಿದ್ದಾರೆ.
ಮೋದಿ ಸರ್ಕಾರ ನಾಳೆ ಬಹು ನಿರೀಕ್ಷಿತ ಕೇಂದ್ರ ಮುಂಗಡ ಪತ್ರ ಮಂಡನೆ ಮಾಡಲಿದೆ. ಬಜೆಟ್ ಮೇಲೆ ನಿರೀಕ್ಷೆ ಗರಿಗೆದರಿದೆ.
ಕೊರೋನಾ ಎರ಼ಡನೆ ಅಲೆಯಿಂತ ಚೇತರಿಸಿಕೊಳ್ಳುತ್ತಿರುವಾಗಲೇ ಮೂರನೆ ಅಲೆ ಅಪ್ಪಳಿಸಿದ್ದು, ಆರ್ಥಿಕ ಚಟುವಟಿಕೆ ಹಿನ್ನೆಡೆ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಹೊಸ ದಾರಿ ಹುಡುಕಬೇಕಾದ ಅನಿವಾರ್ಯತೆ ಎದುರಾಗಿದೆ.