ಕರಾವಳಿ
ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ವಿಧಿವಶ

ಮಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಮಂಗಳೂರಿನ ಯೇನಪೊಯ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಆಸ್ಕರ್ ಫೆರ್ನಾಂಡಿಸ್, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದರು. ಗಾಂಧಿ ಕುಟುಂಬದ ಆಪ್ತರಾಗಿದ್ದ ಇವರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಪ್ರಭಾವಿ ನಾಯಕರಲ್ಲಿ ಓರ್ವರಾಗಿದ್ದರು.
ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ, ಅಳಿಯ ಮಾರ್ಕ್, ಸೊಸೆ ಫ್ರೆಜಿಲ್ ಮತ್ತು ಕುಟುಂಬಸ್ಥರು ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.