ಕರಾವಳಿ
ಉಡುಪಿ : ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 5) ರಜೆ ಘೋಷಣೆ

ಉಡುಪಿ: ಮುಂಗಾರಿನ ಅಬ್ಬರ ಹೆಚ್ಚಾಗುತ್ತಿರುವ
ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಿರಂತರ
ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನಿಸಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು (ಜುಲೈ 5) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್
ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.