ಹಿಜಾಬ್ V/S ಕೇಸರಿ ಶಾಲು; ಉಡುಪಿ ಶಾಸಕ ರಘುಪತಿ ಭಟ್ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು

ಉಡುಪಿ: ಹಿಜಾಬ್ ಕೇಸರಿ ವಿವಾದ ಹಿನ್ನಲೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.
ವಿದೇಶಗಳಿಂದ, ಹೈದರಾಬಾದ್ ನಿಂದ ಇಂಟರ್ ನೆಟ್ ಕಾಲ್ ಮೂಲಕ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆ ಮಾಡಿದ್ದು, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕೆಲವು ನಂಬರ್ ಗಳಿಂದ ಕರೆ ಬಂದಿದ್ದು ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗನ್ ಮ್ಯಾನ್ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ ಆದರೆ ನನಗೆ ಯಾವುದೇ ಗನ್ ಮ್ಯಾಣ್ ಬೇಡ ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಬಳಿ ಮ್ಯಾಂಗಲೋರಿಯನ್ ಪ್ರತಿನಿಧಿ ಮಾತನಾಡಿದ್ದು ಈ ವರೆಗೆ ಅಧಿಕೃತ ದೂರು ನಮಗೆ ಬಂದಿಲ್ಲ ಆದರೂ ಈಗಾಗಲೇ ನಾವು ಇಲಾಖೆಯ ವತಿಯಿಂದ ಅವರಿಗೆ ಗನ್ ಮ್ಯಾನ್ ಪಡೆದುಕೊಳ್ಳಲು ಸೂಚನೆ ನೀಡಿದ್ದು ಅವರು ತನಗೆ ಯಾವುದೇ ಗನ್ ಮ್ಯಾನ್ ಬೇಡ ಎಂದಿದ್ದಾರೆ. ಅವರಿಗೆ ಬಂದಿರುವ ಬೆದರಿಕೆ ಕರೆಯ ಕುರಿತು ಅವರಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.