ರಾಷ್ಟ್ರೀಯ
ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಫೆ.28ರವರೆಗೆ ವಿಸ್ತರಣೆ ಮಾಡಲಾಗಿದೆ..!

ನವದೆಹಲಿ : ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಆಗಮನವನ್ನು ನಿರ್ಬಂಧಿಸಲಾಗಿದ್ದ ಆದೇಶವನ್ನು ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಫೆಬ್ರವರಿ 28, 2022ರವರೆಗೆ ವಿಸ್ತರಿಸಲಾಗಿದೆ.
ಈ ಸಂಬಂಧ ಕೇಂದ್ರ ವಿಮಾನ ಸಚಿವಾಲಯ ( ಡಿಜಿಸಿಎ) ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ನಿರ್ಬಂಧವನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಡಿಜಿಸಿಎನಿಂದ ಅನುಮತಿ ಪಡೆದ ವಿಶೇಷ ವಿಮಾನಗಳ ಸಂಚಾರಕ್ಕೆ, ಅಂತರಾಷ್ಟ್ರೀಯ ಸರಕು ಸಾಗಾಣಿಕೆ ವಿಮಾನಗಳಿಗೆ ಈ ನಿರ್ಬಂಧ ಅನ್ವಯಿಸೋದಿಲ್ಲ ಎಂದು ತಿಳಿಸಿದೆ.