ರಾಷ್ಟ್ರೀಯ
ಕೋವಿಡ್ ಮೂರನೇ ಅಲೆ ಸಾಧ್ಯತೆ ಹಿನ್ನೆಲೆ ದೆಹಲಿಯಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ

ಕೋವಿಡ್ ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಶಾಲೆಗಳನ್ನು ಸದ್ಯಕ್ಕೆ ತೆರೆಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಕೆಲವು ರಾಜ್ಯಗಳಲ್ಲಿ ಶಾಲೆಗಳನ್ನು ತೆರೆದಿರುವುದರಿಂದ ದೆಹಲಿಯಲ್ಲಿಯೂ ಶಾಲೆಗಳನ್ನು ತೆರೆಯಲಿದ್ದೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್, ಕೋವಿಡ್ ಮೂರನೇ ಅಲೆ ಬರಲಿದೆ, ಆದ್ದರಿಂದ ಮಕ್ಕಳನ್ನು ಅಪಾಯಕ್ಕೆ ದೂಡಲು ನಾವು ಸಿದ್ಧರಿಲ್ಲ ಎಂದು ಹೇಳಿದರು.