ರಾಷ್ಟ್ರೀಯ
ಹಿಜಾಬ್ ವಿವಾದ: ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಪುನರಾರಂಭ

ಬೆಂಗಳೂರು: ಹಿಜಾಬ್ ವಿವಾದ ಕುರಿತಂತೆ ಸಲ್ಲಿಸಲಾಗಿರುವ ಅರ್ಜಿ ಕುರಿತು ರಾಜ್ಯ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ಪುನರಾರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭವಾಗಲಿದೆ. ಆರು ಅರ್ಜಿಗಳ ವಿಚಾರಣೆ ನಡೆಯಲಿದೆ.
ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಅಂತಿಮ ತೀರ್ಪು ನೀಡುವ ತನಕ ಶಾಲೆಯಲ್ಲಿ ಯಾವುದೇ ಧಾರ್ಮಿಕ ಗುರುತು ಬಳಸದಂತೆ ಹೈಕೋರ್ಟ್ ಆದೇಶ ನೀಡಿದೆ.