ರಾಷ್ಟ್ರೀಯ
ಇಂದಿನ ಕೊರೋನ ಪ್ರಕರಣ ವಿವರ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 30,757 ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿದೆ.ಇದೇ ಅವಧಿಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ 67,538 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿತರಾಗಿದ್ದ ಒಟ್ಟು 4,19,10,984 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 541 ಮಂದಿ ಮೃತಪಟ್ಟಿದ್ದಾರೆ.
ವಿವಿಧ ಆಸ್ಪತ್ರೆಗಳಲ್ಲಿ 3,32,918 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ದಿನದ ಪಾಸಿಟಿವಿಟಿ ದರ ಶೇಕಡ 2.61 ಕ್ಕೆ ಇಳಿದಿದೆ