ಸರ್ಕಾರಿ ಪದವಿ ಕಾಲೇಜುಗಳಲ್ಲಿ ನೇಮಕಾತಿ: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಸರಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಮೂಲಕ ಈ ನೇಮಕಾತಿ ನಡೆಯಲಿದೆ.
ಅಕ್ಟೋಬರ್ 7ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ತೇರ್ಗಡೆಯಾಗುವುದು ಕಡ್ಡಾಯ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕವಾಗಿ ಉತ್ತರ ಬರೆಯಬೇಕು. ಉಳಿದ ವಿಷಯಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಇರುತ್ತವೆ.
ಅಕ್ಟೋಬರ್ 7ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೆಇಎ ಅಂತರ್ಜಾಲದಲ್ಲಿ ಅರ್ಜಿ ದೊರೆಯಲಿದೆ.
ಸರಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 6ರಂದು ಕೊನೆಯ ದಿನವಾಗಿರುತ್ತದೆ.
ಒಟ್ಟು ಹುದ್ದೆಗಳಲ್ಲಿ ಶೇ. 5ರಷ್ಟು ಹುದ್ದೆಗಳನ್ನು ಇಲಾಖೆಯ ಸಿ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ ಪಾವತಿಗೆ ನವೆಂಬರ್ 10 ಕೊನೆಯ ದಿನವಾಗಿರುತ್ತದೆ.
ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ ಸಹಿತ ಇತರ ಮಾಹಿತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತರ್ಜಾಲದಿಂದ ಪಡೆಯಬಹುದು.
ಅದಕ್ಕಾಗಿ ಈ ಲಿಂಕ್ ಬಳಸಿ: https://cetonline.karnataka.gov.in/kea/