ರಾಷ್ಟ್ರೀಯ

ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ: 38 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

ಅಹಮದಾಬಾದ್‌: 2008ರಲ್ಲಿ ನಡೆದಿದ್ದ ಅಹಮದಾಬಾದ್ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗಿದೆ.

UAPS ಪ್ರಕಾರ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದ್ದು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಅಪರಾಧಿಗಳು ಅಹಮದಾಬಾದ್, ಭೋಪಾಲ್, ಗಯಾ, ಬೆಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿನ ಜೈಲುಗಳಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

ಜುಲೈ 26, 2008 ರಂದು ಅಹಮದಾಬಾದ್​ ನಗರದಲ್ಲಿ ಸರಣಿ ಸ್ಫೋಟ ನಡೆದಿತ್ತು. ಅದರಲ್ಲಿ 56 ಜನರು ಮೃತರಾಗಿದ್ದರೆ, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಫೆಬ್ರವರಿ 8, 2022 ರಂದು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!