ಸರ್ಕಾರದ ನಡೆ ಹಳ್ಳಿ ಕಡೆಗೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರು ಫೆ. 19 ರಂದು ಉಡುಪಿಯ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ – ಶಾಸಕ ರಘುಪತಿ ಭಟ್ ಮಾಹಿತಿ

ರಾಜ್ಯ ಬಿಜೆಪಿ ಸರ್ಕಾರ ಹಮ್ಮಿಕೊಂಡಿರುವ “ಸರ್ಕಾರದ ನಡೆ ಹಳ್ಳಿ ಕಡೆಗೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರಾದ ಆರ್. ಅಶೋಕ್ ಅವರು ದಿನಾಂಕ 19-02-2022 ರಂದು ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಬಗ್ಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಇಂದು ದಿನಾಂಕ 18-02-2022 ರಂದು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಮಾಹಿತಿ ನೀಡಿದರು.
ಉಡುಪಿಗೆ ಆಗಮಿಸುವ ಸಚಿವರನ್ನು ಕೊಕ್ಕರ್ಣೆ ಬಸ್ ನಿಲ್ದಾಣದಿಂದ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು. ಬೆಳಿಗ್ಗೆ 11.30 ರಿಂದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಬಳಿಕ ಕಳ್ತೂರು ಗ್ರಾಮಕ್ಕೆ ಭೇಟಿ ನೀಡಿ, ನಂತರ ಸಂಜೆಯಿಂದ ಆರೂರು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್ ಮತ್ತು ಪತ್ರಿಕಾ ಹಾಗೂ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.