ರಾಷ್ಟ್ರೀಯ
ಇಂದಿನ ಕೋರೋನ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಸಾವಿನ ಸಂಕ್ಯೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 19,968 ಜನರಿಗೆ ಸೋಂಕು ತಗುಲಿದೆ. 673 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವಿಗೀಡಾದವರ ಸಂಖ್ಯೆ 511903ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈಗ 224187 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 48847 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42086383 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಶನಿವಾರ 30,81,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,37,22,697 ಜನರಿಗೆ ಲಸಿಕೆ ಹಾಕಲಾಗಿದೆ. 11,87,766 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.