ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಂದ ಪ್ರತಿಭಟನೆ

ಉಡುಪಿ: ಹಾಜಿ ಅಬ್ದುಲ್ಲಾ ಬಿ.ಆರ್.ಶೆಟ್ಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಬಿ.ಆರ್ ವೆಂಚರ್ಸ್’ಗೆ ನಿರ್ವಹಿಸಲು ಬಿಟ್ಟು ಕೊಟ್ಟ ನಂತರ ಹಲವು ಸಮಸ್ಯೆ ಎದುರಿಸುತ್ತಿದೆ.
ಹಲವು ಬಾರಿ ಆಸ್ಪತ್ರೆಗಳು ಸಿಬ್ಬಂದಿಗಳು ವೇತನಕ್ಕಾಗಿ ಬೇಡಿಕೆಯಿಟ್ಟು ಪ್ರತಿಭಟಿಸಿದ್ದಾರೆ. ಇದೀಗ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಸುತ್ತಿಲ್ಲವೆಂದು ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದು ಇದರಿಂದಾಗಿ ದೂರದ ಊರಿನಿಂದ ಬಂದ ಗರ್ಭಿಣಿ ಮಹಿಳೆಯರು ಪರದಾಡುವಂತಾಗಿದೆ.
ಇದೀಗ 153 ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ನಿರತವಾಗಿದ್ದು ತುರ್ತು ಸಂದರ್ಭದ ಚಿಕಿತ್ಸೆ ಹೊರತು ಪಡಿಸಿ ಯಾವುದೇ ಹೊರ ರೋಗಿ ವಿಭಾಗವನ್ನು ಬಹಿಷ್ಕರಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಪ್ರತಿಭಟನೆಯಿಂದಾಗಿ ಜನ ಸಾಮಾನ್ಯರು ಪರದಾಡುವಂತಾಗಿದೆ. ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು ರೋಗಿಗಳು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಪ್ರತಿಭಟನಾಕಾರರ ಪ್ರಕಾರ, ಕಳೆದ ಮೂರು ತಿಂಗಳಿನಿಂದ ವೇತನ ಬರುತ್ತಿಲ್ಲ. ಆ ಕಾರಣಕ್ಕಾಗಿ ತುರ್ತು ಚಿಕಿತ್ಸೆ ಹೊರತು ಪಡಿಸಿ ಎಲ್ಲ ಸೇವೆ ನಿಲ್ಲಿಸಿದ್ದೇವೆ. ಈ ಕುರಿತು ಆಡಳಿತ ಮಂಡಳಿಗೂ ತಿಳಿಸಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲವೆಂದು ತಿಳಿಸಿದ್ದಾರೆ.
ಅವರು ನಾವು ಸರಕಾರಕ್ಕೆ ಈಗಾಗಲೇ ಬಿಟ್ಟು ಕೊಟ್ಟಿದ್ದೇವೆ. ನೀವು ಅವರನ್ನು ಕೇಳಿಕೊಳ್ಳಿ ಎಂದು ಹೇಳುತ್ತಾರೆ. ಸರಕಾರದ ಅಧಿಕಾರಿಗಳನ್ನು ಈ ಹಿನ್ನಲೆಯಲ್ಲಿ ಭೇಟಿಯಾಗಿದ್ದೇವೆ. ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಿದರು.