ರಾಷ್ಟ್ರೀಯ
ಇಂದಿನ ಕೋರೋನ ಪ್ರಕರಣ ವಿವರ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 13,405 ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ 34,226 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 235 ಮಂದಿ ಮೃತಪಟ್ಟಿದ್ದಾರೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,81,075 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ದಿನದ ಪಾಸಿಟಿವಿಟಿ ದರ ಶೇಕಡ 1.24 ಕ್ಕೆ ಇಳಿದಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ 4,21,58,510 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. ಕೊರೋನಾದಿಂದ ದೇಶದಲ್ಲಿ 5,12,344 ಮಂದಿ ಮೃತಪಟ್ಟಿದ್ದಾರೆ
ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಕೊರೋನಾ ಸಂಬಂಧಿತ ನಿರ್ಬಂಧ ಕ್ರಮಗಳನ್ನು ಸಡಿಲಗೊಳಿಸಲಾಗಿದೆ.